Breaking News

ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ. ಗೃಹ ಲಕ್ಷ್ಮಿಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ:ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್​ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಎದುರು ಮಾತನಾಡಿದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ‌. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ‌. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಕೊಡುವ ಬದಲು ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಅದರ ಹೊರತಾಗಿ ಕಾಳ ಸಂತೆಯಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರ ಶಾಮೀಲಾಗಿದೆ ಅಂತ ಅನುಮಾನ ಬರುತ್ತಿದೆ. ಗೃಹ ಲಕ್ಷ್ಮಿ ಯೋಜನೆ ಸಮೀಕ್ಷೆ ಮಾಡಿದರೆ ಮೊದಲ ತಿಂಗಳು ಕೇವಲ ಶೇ.35% ರಷ್ಟು ಮಹಿಳೆಯರಿಗೆ ಬಂದಿದೆ. ನಂತರದ ಕಂತುಗಳು ಸರಿಯಾಗಿ ಬಂದಿಲ್ಲ. ಗೃಹ ಲಕ್ಷ್ಮಿಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ವಿದ್ಯುತ್ ವಿಚಾರದಲ್ಲಂತೂ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ.‌ ಸಿಎಂ ಸಿದ್ದರಾಮಯ್ಯ ಅವರು ಐದು ಗಂಟೆ ನಿರಂತರ ವಿದ್ಯುತ್ ಕೊಡುವುದಾಗಿ ಹೇಳಿದ್ದಾರೆ. ಆದರೆ, ರೈತರಿಗೆ ಕೇವಲ 3 ಗಂಟೆ ಮಾತ್ರ‌ ವಿದ್ಯುತ್ ಸಿಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ನಾಯಕರು ಸುಮ್ಮನೆ ತೆಲಂಗಾಣಕ್ಕೆ ಹೋಗಿ ಗ್ಯಾರಂಟಿಗಳ ಬಗ್ಗೆ ಪ್ರಚಾರ ಪಡೆಯುತ್ತಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ