Breaking News

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರದಿಂದ ಆದೇಶ

Spread the love

ಬೆಂಗಳೂರು : ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ವಸಿಷ್ಠ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧವು ಸಿಬಿಐ ತನಿಖೆಗೆ ಅದೇಶಿಸಿದ್ದು, ಎರಡು ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಹಣ ಅವ್ಯವಹಾರ ನಡೆದಿತ್ತು.

 

ರಡು ಬ್ಯಾಂಕಗಳಲ್ಲಿ ನೀಯಮ ಬಾಹಿರವಾಗಿ ಸಾಲ ನೀಡಿದ್ದ ಆರೋಪದ ಹಿನ್ನೆಲೆಯಿದ್ದು ಬ್ಯಾಂಕ್ ಹಣವನ್ನು ಖಾಸಗಿಯಾಗಿಯೂ ಸಾಲ ನೀಡಿದ್ದ ಆರೋಪದ ಹಿನ್ನೆಲೆ ಈ ಹಿಂದೆ ಗುರು ಸಾರ್ವಭೌಮ ಬ್ಯಾಂಕಿಗೆ ಆಡಳಿತ ಅಧಿಕಾರಿಯನ್ನು ರಾಜ್ಯ ಸರ್ಕಾರ ನೇಮಿಸಿತ್ತು.ಠೇವಣಿ ಹಣ ಸೇರಿ ಬ್ಯಾಂಕಿಗೆ ಸಂಬಂಧಿಸಿದ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಸಿಬಿಐ ತನಿಖೆಗೆ ಪರಿಷತ್ ಸದಸ್ಯ ಯುಬಿ ವೆಂಕಟೇಶ್ ಈ ಹಿಂದೆ ಆಗ್ರಹಿಸಿದ್ದರು.

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕಟೇಶ್‌ ಅವರು ಕೇಳಿದ್ದ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ್ದ ಸಹಕಾರಿ ಸಚಿವ ಕೆಎನ್​ ರಾಜಣ್ಣ, “ಈ ಪ್ರಕರಣವನ್ನು ಸಿಬಿಐಗೆ ನೀಡಲು ನಿರ್ಧಾರ ಮಾಡಲಾಗಿದೆ. ಆದರೆ, ಕನ್ನಡದಲ್ಲಿರುವ ವಿಷಯಗಳು ಆಂಗ್ಲ ಭಾಷೆಗೆ ಅನುವಾದ ಮಾಡಬೇಕಿರುವುದರಿಂದ ವಿಳಂಬವಾಗಿದೆ.

500 ಪುಟಗಳ ವರದಿಯನ್ನು ಆಂಗ್ಲ ಭಾಷೆಗೆ ಅನುವಾದ ಮಾಡಲಾಗುತ್ತಿದೆ. 


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ