Breaking News

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ:

Spread the love

ನವದೆಹಲಿ: ರಾಜಸ್ಥಾನ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗಣನೀಯ ಮುನ್ನಡೆ ಸಾಧಿಸುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.

 

 

  •  

 

ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಇದು ಬಿಜೆಪಿಗೆ ಸಕರಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತಿದೆ. ಪಕ್ಷವು ಪ್ರತಿ ರಾಜ್ಯದಲ್ಲೂ ಮುನ್ನಡೆ ಸಾಧಿಸುತ್ತಿದೆ. ಮತ ಹಂಚಿಕೆ ಮತ್ತು ಸೀಟು ಹಂಚಿಕೆ ಎರಡರಲ್ಲೂ ನಾವು ಎಲ್ಲಾ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದರು.

 

  •  

 

ಪ್ರಿಯಾಂಕಾ ಗಾಂಧಿಗೆ ಟಾಂಗ್: “ರಾಜಸ್ಥಾನದಲ್ಲಿ ಪ್ರಿಯಾಂಕಾ ಗಾಂಧಿ “ನಾನು ಹುಡುಗಿ, ನಾನು ಹೋರಾಡಬಲ್ಲೆ” ಎಂಬ ಘೋಷಣೆಯನ್ನು ಮಾಡಿದ್ದರು. ಆದರೆ, ಕಳೆದ ಐದು ವರ್ಷಗಳಲ್ಲಿ ಇಡೀ ರಾಜ್ಯವು ದುರಾಡಳಿತಕ್ಕೆ ಒಳಪಟ್ಟಿದೆ. ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಪಕ್ಷದ ನಾಯಕರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಬದಲು ನಾಚಿಕೆಯಿಲ್ಲದ ಹೇಳಿಕೆಗಳನ್ನು ಕೊಡುತ್ತಾರೆ. ಇಂದಿನ ಚುನಾವಣೆ ಮೂಲಕ ರಾಜಸ್ಥಾನದ ಮಹಿಳೆಯರು ಪ್ರಿಯಾಂಕಾ ಗಾಂಧಿಗೆ ಉತ್ತರ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದು ಸಿರ್ಸಾ ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ