Breaking News

ಬಿಜೆಪಿ ಗ್ಯಾರಂಟಿ ಘೋಷಿಸಿದ್ದು ಅದರ ಗೆಲುವಿಗೆ ಕಾರಣ: ಎಂ.ಬಿ ಪಾಟೀಲ್

Spread the love

ವಿಜಯಪುರ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿರೋಧಿಸಿದವರೇ ಗ್ಯಾರಂಟಿ ಘೋಷಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.

 

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಕೆಲಸ ಮಾಡಿದೆ ಎಂದಾಯಿತಲ್ಲವೇ. ಇದೀಗ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಕೂಡ ಗೆಲುವಿಗೆ ಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.

ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ತೆಲಂಗಾಣ ರಾಜ್ಯದಲ್ಲಿ ಅಲ್ಲಿನ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದಾರೆ. ಹೀಗಾಗಿ ಚುನಾವಣೆ ಉಸ್ತುವಾರಿ ವಹಿಸಿದ್ದ ಕರ್ನಾಟಕ ರಾಜ್ಯದ ನಾಯಕರ ಪ್ರಭಾವಕ್ಕಿಂತ ಮತದಾರರೇ ಬದಲಾವಣೆ ಬಯಸಿದ್ದಾರೆ ಎಂದರು.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿಗೆ ಹಲವು ಕಾರಣಗಳಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದ ಅಚ್ಚೆ ದಿನ್ ಬರಲಿಲ್ಲ. ರೈತರ ಆದಾಯ ದ್ವಿಗುಣ ಆಗಲಿಲ್ಲ, ‌ಲಕ್ಷ ಲಕ್ಷ ಉದ್ಯೋಗ ಸೃಷ್ಟಿಯಾಗಲಿಲ್ಲ. ಗಮನಕ್ಕೆ ಏರುತ್ತಿರುವ ಬೆಲೆ ನಿಯಂತ್ರಣ ಆಗಲಿಲ್ಲ. ಹೀಗೆ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳು ಜನತೆಯಲ್ಲಿ ಬೇಸರ ಮೂಡಿಸಬೇಕು. ಐ.ಎನ್.ಡಿ.ಐ.ಎ. ಕೂಟಕ್ಕೆ ದೇಶದ ಜಾತ್ಯಾತೀತ ಮತಗಳು ಒಗ್ಗೂಡಲಿವೆ ಎಂದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ