Breaking News

ಬೆಳಗಾವಿಯಲ್ಲಿ ಅಧಿವೇಶನದ ಸಂತಾಪ ಸೂಚನೆ ಮುಗಿಯುತ್ತಿದ್ದಂತೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಹಾಗು ಜೆಡಿಎಸ್ ಸಿದ್ಧ

Spread the love

ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಅಖಾಡಕ್ಕೆ ದುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.

 

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಾಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಮಹಿಳೆಯರ ಖಾತೆಗೆ ಪಾವತಿಯಾಗುತ್ತಿಲ್ಲ. ಯುವನಿಧಿ ಇನ್ನೂ ಜಾರಿಯೇ ಆಗಿಲ್ಲ. ಗೃಹ ಜ್ಯೋತಿಯಡಿ 200 ಯೂನಿಟ್ ಎಂದು ಹೇಳಿ ಷರತ್ತು ಹಾಕಿ ಕಡಿತ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಕಲ್ಪಿಸಿದ್ದರೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡದ ಕುರಿತು ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಉಭಯ ಪಕ್ಷಗಳು ಮುಂದಾಗಿವೆ.

ಇನ್ನು ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೇ ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದರ ಕುರಿತು ಚಾಟಿ ಪ್ರತಿಪಕ್ಷಗಳು ಸಜ್ಜಾಗಿವೆ. ಕೇಂದ್ರದ ಕಡೆ ಬೆರಳು ಮಾಡಿ ರಾಜ್ಯದಿಂದ ನೀಡಬೇಕಾದ ಪರಿಹಾರವನ್ನು ನೀಡುತ್ತಿಲ್ಲ ಎನ್ನುವ ವಿಷಯವನ್ನು ಮುಂದಿಟ್ಟುಕೊಂಡು ಸದನದಲ್ಲಿ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲಿವೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ