Breaking News

ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣದಲ್ಲಿ ಗೆದ್ದೆವಾ?: ಸಿಎಂ ಸಿದ್ದರಾಮಯ್ಯ

Spread the love

ಬೆಳಗಾವಿ: ಇವತ್ತಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್​ಗಳು ಇವೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ನಮ್ಮ ಸರ್ಕಾರ ತಯಾರಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರೆಂಟಿಗಳು ವರ್ಕೌಟ್ ಆಗಲಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣ ರಾಜ್ಯದಲ್ಲಿ ಗೆದ್ದೆವಾ? ಮಧ್ಯಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಗ್ಯಾರೆಂಟಿ ಘೋಷಣೆ ಮಾಡಿದ್ದರಲ್ಲಾ, ಅವರು ಯಾವುದರ ಮೇಲೆ ಗೆದ್ದರು? ನಾವು ಚುನಾವಣೆ ಗೆಲ್ಲಬೇಕು ಅಂತಾ ಅಲ್ಲ. ಎಲ್ಲ ಧರ್ಮ, ಜಾತಿಯ ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಮಾಡಿರುವ ಕಾರ್ಯಕ್ರಮಗಳು ಇವು. ಗ್ಯಾರೆಂಟಿ ಅಂತಾ ಹೆಸರು ಇಟ್ಟಿದ್ದೇವೆ ಅಷ್ಟೇ. ಆದರೆ ಇವೆಲ್ಲಾ ಬಡವರ ಕಾರ್ಯಕ್ರಮಗಳು ಎಂದು ಸಮರ್ಥಿಸಿಕೊಂಡರು.

ರಾಜ್ಯದ ಹಣ ತೆಗೆದುಕೊಂಡು ತೆಲಂಗಾಣದಲ್ಲಿ ಜಾತ್ರೆ ಮಾಡಿದರು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಆರು ತಿಂಗಳು ಬೇಕಾಯಿತು. ನಮ್ಮ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಎಂದು ವಾಗ್ದಾಳಿ ಮಾಡಿದರು


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ