Breaking News

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್

Spread the love

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ ನಾಯಕತ್ವ ನೀಡಿಲ್ಲ. ನಾವು ದ.ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎಂದು ಅಸಮಾಧಾನ ಹೊರಹಾಕಿದರು.

ದೇಶಕ್ಕೆ ನರೇಂದ್ರ ಮೋದಿಯೇ ಗ್ಯಾರಂಟಿ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ ರಾಜಕಾರಣ. ಕುಟುಂಬ ರಾಜಕಾರಣವನ್ನು ತೆಲಂಗಾಣದಲ್ಲಿ ಕಿತ್ತು ಹಾಕಲಾಗಿದೆ. ಇಡೀ ದೇಶದಲ್ಲೂ ಕುಟುಂಬ ರಾಜಕಾರಣವನ್ನು ಕಿತ್ತು ಹಾಕಲಾಗುವುದು ಎಂದು ಪರೋಕ್ಷವಾಗಿ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.

ಮುಂದುವರೆದು ಮಾತನಾಡಿ, ಪ್ರಾಮಾಣಿಕರು, ಹಿಂದೂ ವಿಚಾರಧಾರೆ ಹೊಂದಿರುವವರು ಆಡಳಿತ ನಡೆಸಬೇಕು. ವಂಶವಾದದ ನಿರ್ಮೂಲನೆಯೇ ನಮ್ಮ ಗುರಿ. ಇನ್ಮೇಲೆ ಬದಲಾವಣೆ ಆಗಲಿದೆ. ಲೋಕಸಭೆ ಚುನಾವಣೆ ಮುಗಿಯಲಿ, ಬದಲಾವಣೆ ಬರುತ್ತದೆ ಎಂದರು


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು

Spread the loveಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು ಹುಬ್ಬಳ್ಳಿ: “ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತಾತ್ಕಾಲಿಕವಾಗಿ ಮಾತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ