ಬೈಲಹೊಂಗಲ: ‘ಪ್ರತಿಯೊಬ್ಬ ಛಾಯಾಗ್ರಾಹಕರು ತಮ್ಮ ವೃತ್ತಿ ಬದುಕಿನ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೇಳಿದರು.
ಪಟ್ಟಣದ ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಪೋಟೊಗ್ರಾಫರ್ ಮತ್ತು ವಿಡಿಯೊಗ್ರಾಫರ್ ಸಂಘದ 8ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ಥಳೀಯವಾಗಿಯು ಸಾಕಷ್ಟು ಹಿರಿಯ ಛಾಯಾಗ್ರಾಹಕರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಿರಿಯ ಛಾಯಾಗ್ರಾಹಕರು ಮುನ್ನಡೆಯಬೇಕು. ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು’ ಎಂದರು.
ಸಾನ್ನಿಧ್ಯ ವಹಿಸಿದ್ದ ಮೂರುಸಾವಿರಮಠದ ಪೀಠಾಧಿಪತಿ ಪ್ರಭುನೀಲಕಂಠ ಸ್ವಾಮೀಜಿ, ‘ಪೋಟೊಗ್ರಫಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದೆ. ಸ್ಥಳೀಯ ಛಾಯಾಗ್ರಾಹಕರು ಹೊಸ ತಂತ್ರಜ್ಞಾನ ಮೈಗೂಡಿಸಿಕೊಂಡು ತಮ್ಮ ಪ್ರತಿಭೆ ತೋರಿಸಬೇಕು. ಸಂಘದ ಏಳ್ಗೆಗೆ ಶ್ರಮಿಸಬೇಕು’ ಎಂದರು.
Laxmi News 24×7