Breaking News

ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ.

Spread the love

ಬೆಳಗಾವಿ : ರಮೇಶ್‌ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ ಅಥವಾ ಶಡ್ಯಂತ್ರವೋ ಗೊತ್ತಾಗಬೇಕು.

ಆತ ಮೋಸ್ಟ್‌ ಬೋಗಸ್‌ ಎಂದಿದ್ದಾರೆ.

ನಮ್ಮ ಕುಟುಂಬದವರೆಲ್ಲರೂ ಶಾಂತಿ ಪ್ರಿಯರು. ಎಸ್ ಪಿ ಜೊತೆ ಮಾತನಾಡಿದ್ದೇನೆ. ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಆತ ಯಾರ ಆಪ್ತ ಎನ್ನುವುದಕ್ಕಿಂತ ನಮ್ಮ ಹೆಸರು ಬಂದಿದೆ ಈ ಬಗ್ಗೆ ವಿಚಾರ ಮಾಡಿದ್ದೇನೆ. ಪೃಥ್ವಿ ಸಿಂಗ್‌ ನನ್ನೇ ವಿಚಾರಣೆ ಮಾಡಬೇಕು. ಆತನ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು 24 ಗಂಟೆಯೊಳಗೆ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ.

ನೆನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಬೆಳಗಾವಿಯ ಜಯನಗರದ ನಿವಾಸದ ಬಳಿ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿತ್ತು.ಇದರಿಂದ ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿದ್ದವು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರಾದ ಸುಜಯ್ ಮತ್ತು ಚನ್ನರಾಜ ಅವರ ಬಾಡಿಗಾರ್ಡ್ ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ