Breaking News

ಕುಡಿಯುವ ನೀರಿಗಾಗಿ ಜಿ.ಪಂ.ಗಳಿಗೆ ಪ್ರತ್ಯೇಕ ಅನುದಾನ: ಪ್ರಿಯಾಂಕ್ ಖರ್ಗೆ

Spread the love

ಬೆಳಗಾವಿ/ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತಗೊಂಡಿದೆ. ಈ ಕುರಿತಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸು ಮಾಡಲು ತಜ್ಞರನ್ನು ಒಳಗೊಂಡ ವಾಟರ್ ಆಡಿಟ್ ಕಮಿಟಿ ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು.

 

ಇಂದು ಬರ ವಿಷಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಎಲ್ಲ ಜಿಲ್ಲಾ ಪಂಚಾಯತಿಗಳ ಮೂಲಕ ಪ್ರತಿ ಜಿಲ್ಲೆಯಲ್ಲಿ ಕಂಟಿಜೆನ್ಸಿ ಪ್ಲಾನ್ ತಯಾರಿಸಲಾಗಿದೆ. ಪ್ರತಿ ತಿಂಗಳು ತಾವು ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ಜರುಗಿಸಿ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಬರ ನಿರ್ವಹಣೆಯಲ್ಲಿ ಲೋಪವಾಗದಂತೆ, ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಬರ ಹಿನ್ನೆಲೆಯ ಸಮಸ್ಯೆಗಳ ಬಗ್ಗೆ ಸರಕಾರ ಮುನ್ನೆಚ್ಚರಿಕೆ ವಹಿಸಿದೆ. ಪ್ರತಿ ಜಿಲ್ಲಾ ಪಂಚಾಯತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಲ್ಲಿ ಕುಡಿಯುವ ನೀರಿಗಾಗಿ 1 ಕೋಟಿ ರೂ ಹಣವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಸದನ ಸದಸ್ಯರ ಸಲಹೆ ಮೇರೆಗೆ ಅಗತ್ಯವಿರುವ ಕಡೆ ಕ್ರಮ ವಹಿಸುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ