Breaking News

ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿದ ಹೆಚ್‌ಡಿಕೆ

Spread the love

ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ.

ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿಂದು ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಹೆಚ್​ಡಿಕೆ ಗಂಭೀರ ಆರೋಪ ಮಾಡಿದರು. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಸರಕಾರದ ಅಸಡ್ಡೆ, ನಿರ್ಲಕ್ಷ್ಯ ನನಗೆ ಅಚ್ಚರಿ, ಕಳವಳ ತಂದಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತದೆ. ಬೆಳೆನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಕಾರ ಸಾಲಮನ್ನಾ ಮೂಲಕ ಸಹಾಯಕ್ಕೆ ಬರಬೇಕು ಎಂದು ಆಗ್ರಹಿಸಿದರು.

2001ರಿಂದ ಇಲ್ಲಿಯತನಕ ರಾಜ್ಯದಲ್ಲಿ ಬರಗಾಲ, ಭಾರೀ ಪ್ರವಾಹ ಸಮಸ್ಯೆಯನ್ನು ಎದುರಿಸಿದ್ದೇವೆ. ಹೊಸ ಸರಕಾರ ಕಾಂಗ್ರೆಸ್ ನಾಯಕತ್ವದಲ್ಲಿ ಬಂದಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ತರುವ ಭರದಲ್ಲಿ ಉಳಿದ ಕಾರ್ಯಗಳ ಕಡಗಣನೆ ಮಾಡಲಾಗಿದೆ. ಗ್ಯಾರಂಟಿಗಳ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಮುಂಗಾರು ಪ್ರಾರಂಭ ಆಗಿದೆ ಅಂತ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಕೈ ಕೊಟ್ಟಿದೆ. ಆಗಸ್ಟ್ ತಿಂಗಳಿನಿಂದಲೇ ಈ ವರ್ಷ ಬರಗಾಲದ ಛಾಯೆ ಮೂಡಿದೆ ಎಂದು ಹೆಚ್​ಡಿಕೆ ಹೇಳಿದರು.

ಜಿಲ್ಲಾಧಿಕಾರಿಗಳ ಪಿಡಿಒ ಅಕೌಂಟ್‌ನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರೂಪಾಯಿ ಇಡಲಾಗಿದೆ. ಕೇಂದ್ರ ಸರಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದೆ ಸರಕಾರ. ಸರಕಾರ ಕೊಟ್ಟಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ 10% ಬೆಳೆ ನಷ್ಟಕ್ಕೂ ಪರಿಹಾರ ಕೊಡಲು ಆಗುವುದಿಲ್ಲ. ಹೀಗಾಗಿ ರೈತರು ಸರಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ