Breaking News

ಕಾರವಾರದ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ

Spread the love

ಬೆಳಗಾವಿ/ ಬೆಂಗಳೂರು : ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಬೇಡಿಕೆ ಸರ್ಕಾರದಿಂದ ಸ್ವೀಕೃತವಾಗಿದ್ದು, ಇದೀಗ ಪರಿಶೀಲನೆಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಇಂದು ಶಾಸಕ ಸತೀಶ್‌ ಕೃಷ್ಣ ಸೈಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆಗೆ ಮಂಜೂರಾಗಿದ್ದ 4 ತಜ್ಞ ವೈದ್ಯರು ಹಾಗೂ 3 ಉಪಮುಖ್ಯ ವೈದ್ಯಾಧಿಕಾರಿ ಹುದ್ದೆಗಳು ಸೇರಿದಂತೆ ಒಟ್ಟು 7 ಹುದ್ದೆಗಳನ್ನು ಪ್ರಾಧ್ಯಾಪಕರು/ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳನ್ನಾಗಿ ಮರು ಪದನಾಮೀಕರಿಸಿ ಆದೇಶಿಸಲಾಗಿದೆ ಎಂದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿರುವ ಹುದ್ದೆಗಳಿಗೆ ಈಗಾಗಲೇ 2 ಬಾರಿ ನೇರ ಸಂದರ್ಶನ ಕರೆಯಲಾಗಿತ್ತು. ಆದರೆ ಯಾವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿಲ್ಲ. ಹಾಗಾಗಿ ಸದರಿ ಹುದ್ದೆಗಳನ್ನು ಮತ್ತೊಮ್ಮೆ ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಅನುಮತಿ ನೀಡಲಾಗಿದೆ ಎಂದು ಸಚಿವ ಪಾಟೀಲ್ ಅವರು ಹೇಳಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ