Breaking News

ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ

Spread the love

ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ.

ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು ಹೆಚ್ಚಿಸಬೇಕು. ಈ ಕುರಿತು ಸಕ್ಕರೆ ಕಾರ್ಖಾನೆಗಳೊಂದಿಗೆ ಸರ್ಕಾರ ಮಾತುಕತೆ ನಡೆಸಿ ಕಾರ್ಮಿಕರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಸುಧಾರಿತ ಕಬ್ಬು ಮಷಿನ್​ನಿಂದ ಕಟಾವು ಮಾಡಿದರೆ ಕಾರ್ಖಾನೆಯವರು ಪ್ರತಿ ಟನ್ ಕಬ್ಬು ಕಟಾವಿಗೆ 450 ರೂ. ನೀಡುತ್ತಿದ್ದಾರೆ. ಆದರೆ ಕಾರ್ಮಿಕರು ಕಟಾವು ಮಾಡಿದ ಕಬ್ಬಿಗೆ 324 ರೂ ನಿಗದಿಪಡಿಸಲಾಗಿದೆ. ಆದಷ್ಟು ಬೇಗ ಈ ತಾರತಮ್ಯ ಹೋಗಲಾಡಿಸಬೇಕು. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿ ತಾರತಮ್ಯ ನೀತಿಯನ್ನು ಹೋಗಲಾಡಿಸಬೇಕೆಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

Spread the loveಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ