Breaking News

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Spread the love

ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ.

ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೋಸ್ಕರ ಹಿಂದೆ ವಿಧಾನಸೌಧದ ಮುಂದೆಯೇ ಹೋರಾಟ ಮಾಡಬೇಕು ಎಂದು ತೀರ್ಮಾನಿಸಿದ್ದೆವು. ಸಮಾಜದ ಸಭೆಯಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೆವು. ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಆದಷ್ಟು ಬೇಗನೆ ಸಿಎಂ ಪಂಚಮಸಾಲಿ ಮುಖಂಡರು ಒಳಗೊಂಡು ಬೆಂಗಳೂರಿನಲ್ಲಿ ಸಭೆ ಮಾಡುವುದಾಗಿ ಭರವಸೆ ನೀಡಿದ್ದರು. ಅವತ್ತಿನಿಂದ ಇವತ್ತಿನವರೆಗೂ ನಮ್ಮ ಮನವಿಗೆ ಸಿಎಂ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಚಳಿಗಾಲದ ಅಧಿವೇಶನದ ಒಳಗೆ ಶಾಸಕರ ಸಭೆ ಕರೆದು ಪಂಚಮಸಾಲಿ ಸಮಾಜದ ಮೀಸಲಾತಿ ನಿಲುವು ಸ್ಪಷ್ಟಪಡಿಸಬೇಕು. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿ.13ರಂದು ಬೃಹತ್ ಪ್ರತಿಭಟನೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ ಗಾಂಧಿಭವನದಿಂದ ಚೆನ್ನಮ್ಮ ವೃತ್ತದವರೆಗೂ ಪಾದಯಾತ್ರೆ ಮಾಡಿ ಪ್ರತಿಭಟನೆ ಮಾಡಲಾಗುವುದು. ನಮ್ಮ ಹೋರಾಟ ದಶಕಗಳಿಂದ ನಡೆಯುತ್ತಿದೆ. ಅಧಿವೇಶನದಲ್ಲಿ ಶಾಸಕರು ಧ್ವನಿ ಎತ್ತುವ ಕೆಲಸ ಮಾಡಲಿ, ಸಮಾಜದ ಎಲ್ಲಾ ಶಾಸಕರಿಗೂ ನಾನು ಮನವಿ ಮಾಡುತ್ತೇನೆ ಎಂದು ಶ್ರೀಗಳು ತಿಳಿಸಿದರು.

ಪಂಚಮಸಾಲಿ ಸಮಾಜದ ಶಾಸಕರು ಪಕ್ಷಾತೀತವಾಗಿ ಹೋರಾಟ ಮಾಡಬೇಕು. ಆಕ್ರೋಶದ ಕಟ್ಟೆ ಒಡೆಯುವ ಮುನ್ನವೇ ಸರ್ಕಾರ ಸ್ಪಂದಿಸಬೇಕು. ಇನ್ನೂ ಕಾಲ ಮಿಂಚಿಲ್ಲ. ಅಧಿವೇಶನದ ಸಂದರ್ಭದಲ್ಲಿ ಸಮಾಜದ ಶಾಸಕರನ್ನು ಕರೆದು, ಅವರ ಜತೆಗೆ ಸಭೆ ಮಾಡಿ ಸರ್ಕಾರ ತೀರ್ಮಾನಿಸಲಿ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣ: ಬಂಧನದ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್

Spread the loveಮಂಗಳೂರು (ಆಗಸ್ಟ್ .21):  ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ