Breaking News

ಮಹಿಳೆ ಮೇಲಿನ ಹಲ್ಲೆ ಅಮಾನವೀಯ ಹೇಯಕೃತ್ಯ: ಹೆಬ್ಬಾಳ್ಕರ್

Spread the love

ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

 

ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಹೇಯಕೃತ್ಯ. ಇಡೀ ಸಮಾಜವೇ ತಲೆತಗ್ಗಿಸುವ ಘಟನೆ. ಇಂತಹ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದರು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ