ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ ಇಟ್ಟುಕೊಂಡಿದ್ದ
ಔತಣಕೂಟದಲ್ಲಿ ನಾನು ಭಾಗಿಯಾಗಿ ಊಟ ಮಾಡಿದೆ. ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹೀಗಾಗಿ 11 ಗಂಟೆಗೆ ಡಿಕೆಶಿ ಕರೆದ ಔತಣಕೂಟಕ್ಕೆ ತೆರಳಿ ವಿಷ್ ಮಾಡಿ ಬಂದೆ ಎಂದು ಸ್ಪಷ್ಟಪಡಿಸಿದರು.
Laxmi News 24×7