ಬೆಳಗಾವಿ: ಸಂಸತ್ತಿನ ಇತಿಹಾಸದಲ್ಲಿ ಆಗದೇ ಇರುವ ಭದ್ರತಾ ಲೋಪವನ್ನು ಇಡೀ ವಿಶ್ವವೇ ನೋಡಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡದೇ ಇರುವುದು ಆಶ್ಚರ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ.
ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಹೊಸದಾಗಿ ಸಂಸತ್ ನಿರ್ಮಿಸಿದ್ದೇವೆ. ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮಾಡಿದ್ದೇವೆ ಎಂದು ಹೇಳುವಾಗ ಇಬ್ಬರು ಯುವಕರು ಗ್ಯಾಲರಿಗೆ ಬಂದು, ಅಲ್ಲಿಂದ ಜಿಗಿದು ನೇರವಾಗಿ ಸದನದ ಒಳಗೆ ಬರುತ್ತಾರೆ ಎಂದರೆ ಹೇಗೆ..? ಯಾರೂ ನಂಬಲು ಸಾಧ್ಯವಿಲ್ಲ. ವಿಶೇಷವಾಗಿ ನಮ್ಮ ರಾಜ್ಯದ ಸಂಸದರಾದ ಪ್ರತಾಪ್ ಸಿಂಹ್ ಪಾಸ್ಗಳನ್ನು ಕೊಟ್ಟಿದಾರೆ ಎಂದು ಗೊತ್ತಾಗಿದೆ. ಅವರಿಗೆ ಪರಿಚಯ ಇದ್ದ ಯುವಕರಿಗೆ ಪಾಸ್ಗಳನ್ನು ಕೊಟ್ಟಿದ್ದಾರೆ. ಹೀಗಾಗಿ ಅವರೂ ಸಹ ಇದಕ್ಕೆ ಹೊಣೆಯಾಗುತ್ತಾರೆ. ಅವರನ್ನೂ ಕೂಡ ಸಂಸತ್ ಸ್ಥಾನದಿಂದ ಅಮಾನತು ಮಾಡುವಂತೆ ನಮ್ಮ ಕಾಂಗ್ರೆಸ್ ಪಕ್ಷ ಹಾಗೂ ಬೇರೆ ಪಕ್ಷದವರೂ ಆಗ್ರಹಿಸಿದ್ದಾರೆ” ಎಂದರು.
Laxmi News 24×7