Breaking News

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

Spread the love

ಬೆಳಗಾವಿ: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ ನಲ್ಲಿ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್ ಹೊರ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದ ನೂರಕ್ಕೂ ಅಧಿಕ ಹೊರ ಗುತ್ತಿಗೆ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ನಮಗೆ ಕನಿಷ್ಠ ವೇತನ ಸಿಗುತ್ತಿಲ್ಲ‌. ಪಿ ಎಫ್ ಕಟ್ಟುತ್ತಿಲ್ಲ, ಸಾಕಷ್ಟು ಮ್ಯಾನ್​​ ಪವರ್ ಎಜೆನ್ಸಿಯಿಂದ ಮೋಸ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು. ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ‌ ಸಂತೋಷ್​​ ಲಾಡ್ ಪ್ರತಿಭಟನಾಕಾರರ ಸಮಸ್ಯೆ ಆಲಿಸಿ‌ ಮನವಿ ಸ್ವೀಕರಿಸಿದರು.

ಸಂಘದ ರಾಜ್ಯಾಧ್ಯಕ್ಷ ಭೀಮ ಶೆಟ್ಟಿ ಮಾತನಾಡಿ, ಬೆಳಗಾವಿ ಜಿಲ್ಲೆಯಂತಹ ದೊಡ್ಡ ಜಿಲ್ಲೆಯಲ್ಲಿ ರಾಮ ಕಂಪ್ಯೂಟರ್ ಏಜೆನ್ಸಿಯಿಂದ ಹೊರ ಗುತ್ತಿಗೆ ನೌಕರರಿಗೆ ಬಹಳಷ್ಟು ಮೋಸ ಆಗುತ್ತಿದೆ. ಪ್ರತಿ ತಿಂಗಳು 2 -3 ಸಾವಿರ ರೂ ಸಂಬಳ ಕಡಿತ ಮಾಡಿ ನೀಡಲಾಗುತ್ತಿದೆ. ಅದನ್ನೂ ಏಜೆನ್ಸಿಯವರು ಕೊಳ್ಳೆ ಹೊಡೆಯುತ್ತಿದ್ದಾರೆ.‌ ಇದು ಸರ್ಕಾರದ ಗಮನಕ್ಕೂ ಇದೆ ಎಂದು ಆರೋಪಿಸಿದರು.

ಹೊರಗುತ್ತಿಗೆ ನೌಕರರ ಈ ಏಜೆನ್ಸಿ ತಗೆದು ಹಾಕಿ, ಇಲಾಖೆಯಿಂದ ನೇಮಕ ಮಾಡಿಕೊಳ್ಳಬೇಕು. ಕನಿಷ್ಠ ವೇತನ ನಮಗೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯ ಮಾಡಿದರು. ಸಂಘದ ಗೌರವಾಧ್ಯಕ್ಷ ನಿತ್ಯಾನಂದ ಸ್ವಾಮಿ, ಕೆ.ಹನುಮೇಗೌಡ, ಚಂದ್ರಪ್ಪ ಹೊಸಕೇರಾ, ಎಂ. ಜಂಬಯ್ಯನಾಯ್ಕ, ಕೆ.ಮುನಿಯಪ್ಪ, ಶಾಂತಕ್ಕ ಗಡ್ಡಿಯವರ, ಎಲ್.ಭವಾನಿ ಸೇರಿದಂತೆ ಮತ್ತಿತರರು ಇದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ