ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದ್ದಾರಾ? ನಯಾಪೈಸೆ ಬಿಡುಗಡೆ ಮಾಡಿದ್ದಾರಾ ಹೇಳಿ ಎಂದು ಅವರು ಪ್ರಶ್ನಿಸಿದರು.