Breaking News
Home / ರಾಜಕೀಯ / ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

Spread the love

ಬೆಳಗಾವಿ: ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ ಗಾಯಗೊಂಡವರು. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ಇನ್ನುಳಿದವರನ್ನು ಸ್ಥಳೀಯ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸೋರಿಕೆ ಆಗಿದೆ. ವಾಸನೆ ಬಂದು ಹಿನ್ನೆಲೆ ಮೊಬೈಲ್​ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಇಂದು ರಾತ್ರಿ ಖರ್ಗೆ ನಿವಾಸದಲ್ಲಿ ‘ಇಂಡಿಯಾ’ ನಾಯಕರ ಸಭೆ

Spread the love ನವದೆಹಲಿ: ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮೈತ್ರಿಕೂಟದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ