Breaking News

ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪ ಚೇತನ್ ವಿರುದ್ಧ ದೂರು ದಾಖಲ

Spread the love

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇರೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಕೀಲ ಆರ್​ಎಲ್​ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೇತನ್ ಪೋಸ್ಟ್​​ನಲ್ಲೇನಿದೆ?

”ಇಬ್ಬರು ಯೋಧರ ಕಥೆ:

ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ.

ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.

ದುರಾದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ / ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ” ಎಂದು ನಟ ಚೇತನ್ ಅಹಿಂಸಾ ಅವರು ತಮ್ಮ ಸೋಷಿಯಲ್​ ಮೀಡಿಯಾ ಪ್ಲಾಟ್​​ಫಾರ್ಮ್​​ಗಳಲ್ಲಿ ಇತ್ತೀಚಿಗೆ ಪೋಸ್ಟ್ ಪ್ರಕಟಿಸಿದ್ದರು. ಇದರಿಂದಾಗಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ, ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್​ಎಲ್​ಎನ್ ಮೂರ್ತಿಯವರು ದೂರು ನೀಡಿದ್ದಾರೆ. ಅದರನ್ವಯ ಪೊಲೀಸರು ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ