Breaking News

ಮುಜರಾಯಿ ಇಲಾಖೆಗೆ ʻಖಾಸಗಿ ದೇವಾಲಯಗಳʼ ಸೇರ್ಪಡೆ ಇಲ್ಲ : ರಾಮಲಿಂಗ ರೆಡ್ಡಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಯಾವುದೇ ಖಾಸಗಿ ದೇವಾಲಯಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ನೋಟಿಸ್ ನೀಡುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ಇದಕ್ಕೆ ರಾಮಲಿಂಗ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ