Breaking News

ಬೆಳಗಾವಿ: ಪ್ಲಾಸ್ಟಿಕ್‌ ಬಳಸಿ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ

Spread the love

ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು.

 

‘ಶೇ 6ರಿಂದ ಶೇ 8ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಿರ್ಮಿಸುವ ರಸ್ತೆಯು ಡಾಂಬರೀಕರಣ ರಸ್ತೆಗಿಂತ ಇದರ ನಿರ್ಮಾಣ ವೆಚ್ಚ, ಬಾಳಿಕೆ ಹಾಗೂ ಗುಣಮಟ್ಟದಲ್ಲಿ ಉತ್ತಮವಾಗಿರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ’ ಎಂಬ ಮಾಹಿತಿಯನ್ನು ವಾಣಿ ಜೋಶಿ ಅವರು ಸಭೆಗೆ ನೀಡಿದರು.

ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ನಂತರ ಅದರ ಗುಣಮಟ್ಟ ಹಾಗೂ ಬಾಳಿಕೆಯನ್ನು ಆಧರಿಸಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇತರ ರಸ್ತೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಲಾಗುವುದು ಎಂದೂ ತಿಳಿಸಿದರು.

ಸಭೆಯಲ್ಲಿ ಉಪಮೇಯರ್ ರೇಷ್ಮಾ ಪಾಟೀಲ, ಪಾಲಿಕೆ ಪರಿಷತ್ ಕಾರ್ಯದರ್ಶಿ ಉದಯಕುಮಾರ ತಳವಾರ್, ಎಂಜಿನಿಯರ್‌ ಲಕ್ಷ್ಮೀ ನಿಪ್ಪಾಣಿಕರ ಮುಂತಾದವರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ