Breaking News

ನಮ್ಮ ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು ಎಂದ ದಿಂಗಾಲೇಶ್ವರ ಸ್ವಾಮೀಜಿ

Spread the love

ಹುಬ್ಬಳ್ಳಿ : ನಮ್ಮ ಸಮಾಜದ ನಾಯಕರು ಮತ್ತು ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಪುರಾಣವೊಂದನ್ನು ಉಲ್ಲೇಖಿಸಿ ಹೇಳಿರುವುದು ಎಂದು ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಹೇಳಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ” ಪುರಾಣದಲ್ಲಿ ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ” ಎಂದು ಹೇಳಿದರು.

ನಮ್ಮ ಮಠಗಳನ್ನು ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನು ನಾವು ಸಹಿಸಬಾರದು. ಮಠಾಧಿಪತಿಗಳು, ರಾಜಕೀಯ ನಾಯಕರು ಸಮಾಜಕ್ಕೆ ಆಧಾರ ಸ್ತಂಭವಿದ್ದಂತೆ. ಲಿಂಗಾಯತ ನಾಯಕರ ಕಂಬ ಗಟ್ಟಿಯಾಗಿರಬೇಕು, ಎಲ್ಲರೂ ಎಚ್ಚೆತ್ತುಕೊಳ್ಳುವ ಕಾಲ ಬಂದಿದೆ ಎಂದು ಭಾಷಣ ಮಾಡಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ