Breaking News

CM&DCM ದೆಹಲಿಗೆ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”:DCM

Spread the love

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”
ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದರು. ಇದೇ 21 ರಂದು ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ” ಎಂದು ತಿಳಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ