Breaking News

ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ

Spread the love

ವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಭೇಟಿಗೂ ಸಮಯ ನಿಗದಿಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಇಲಾಖೆಗಳ ಸಹಕಾರ, ನರೇಗಾ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮುಂತಾದವುಗಳ ಬಗ್ಗೆ ಸಿಎಂ ಮನವಿ ಸಲ್ಲಿಸುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ