ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿತು.
ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಮಾಡಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಹಾಕಿತು.
ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಸೆ.17 ಎ ನಲ್ಲಿ ತಿಳಿಸಿರುವ ಪ್ರಕ್ರಿಯೆ ಪಾಲಿಸಿಲ್ಲ. ಶಾಸಕರಾಗಿದ್ದೂ ಅವರ ವಿರುದ್ದ ಪೂರ್ವಾನುಮತಿ ಪಡೆಯದೆ ಪ್ರಕರಣ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕರಣ ರದ್ದುಪಡಿಸಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Laxmi News 24×7