Home / ರಾಜಕೀಯ / ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮಾನತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮಾನತು

Spread the love

ಬೆಳಗಾವಿ: ದುರ್ನಡತೆ ಹಾಗೂ ಬೆಳಗಾವಿ ಜಿಲ್ಲಾ ಕಚೇರಿಯ ಅಧಿಕಾರಿಗಳು ಹಾಗೂ ನೌಕರರ ಮೇಲೆ ದೌರ್ಜನ್ಯ ಎಸಗಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜ ಎ.ಎಂ. ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಗೊಳಿಸಿ ಆದೇಶಿಸಲಾಗಿದೆ.

 

ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿಎಂ.ಎಸ್. ಈ ಆದೇಶ ಹೊರಡಿಸಿದ್ದು ಅಮಾನತಿಗೊಳಗಾದ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಪೂರ್ವಾನುನತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮಾನತು ಶಿಕ್ಷೆಗೆ ಗುರಿಯಾದ ಉಪನಿರ್ದೇಶಕ ಬಸವರಾಜ ಅವರು ಮಾನಸಿಕವಾಗಿ ಬಹಳ ಕಿರುಕುಳ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಕಚೇರಿಯ ಬಹುತೇಕ ಸಿಬಂದಿಗಳು ಸಚಿವರಿಗೆ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ಈಗ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ