Breaking News

ನಾಳೆ ಬೆಂಗಳೂರಿನ ‘ಫ್ರೀಡಂ ಪಾರ್ಕ್’ನಲ್ಲಿ ‘ರಾಷ್ಟ್ರೀಯ ರೈತರ ಮಹಾ ಅಧಿವೇಶನ’

Spread the love

ಬೆಂಗಳೂರು: ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತರ ಮಹಾ ಅಧಿವೇಶನವನ್ನು ನಡೆಸಲಾಗುತ್ತಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ)ದ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯತರ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ವಿಶ್ವ ರೈತ ದಿನದಂದು ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಲಾಗುತ್ತಿದೆ.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಹಸ್ರಾರು ರೈತರು ಭಾಗವಹಿಸುತ್ತಿದ್ದಾರೆ ರಾಜ್ಯದ ಐದು ಪ್ರಗತಿಪರ ಸಾಧಕ ರೈತರನ್ನು ಐಎಎಸ್ ಪದವಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬರಗಾಲದ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಕೃಷಿ ಉತ್ಪನ್ನಗಳಿಗೆ ಖಾತರಿ ಬೆಂಬಲ ಬೆಲೆ ಶಾಸನ ಒತ್ತಾಯಿಸಲು , ಬರಗಾಲದ ಪರಿಹಾರ 25,000 ನೀಡುವಂತೆ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ರೈತರ ಮಹಾ ಅಧಿವೇಶನ ನಡೆಸಲಾಗುತ್ತಿದೆ ಎಂದಿದ್ದಾರೆ.

ಈ ಅಧಿವೇಶನಕ್ಕೆ ರಾಷ್ಟ್ರಮಟ್ಟದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರುಗಳಾದ ಪಂಜಾಬ್ ನ ಜಗಜಿತ್ ಸಿಂಗ್ ದಲೆವಾಲ, ಮಧ್ಯಪ್ರದೇಶದ ಶಿವಕುಮಾರ್ ಕಕ್ಕ ಹರಿಯಾಣದ ಅಭಿಮನ್ಯು ಕೋಹರ, ಕೇರಳದ ಕೆ ವಿ ಬಿಜು, ಒಡಿಸ್ಸಾದ ಸಚಿನ್ ಮಹಾಪಾತ್ರ, ತಮಿಳುನಾಡಿನ ಪಾಂಡೆ, ರಾಮನಗೌಂಡರ್ ಮಹಾರಾಷ್ಟ್ರದ ಶಂಕರ್ ದರೆಕರ್, ಒಡಿಸ್ಸಾದ ಸಚಿನ್ ಮಹಪಾತ್ರ ,ತೆಲಂಗಾಣದ ನರಸಿಂಹ ನಾಯ್ಡು ಹಿಮಾಚಲದ ಲಕ್ವೀನ್ದರ್ ಸಿಂಗ್ ಅಲೋಕ್ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ