ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ಪ್ರಶ್ನೆ ಮಾಡಿದ್ದಕ್ಕೆ ಆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
Laxmi News 24×7