ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು. ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು.
ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಪಕ್ಷದ ಧ್ಯೇಯವಾಗಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಬೇಕು. ಶಾಲಾ ಕಾರೇಜುಗಳಲ್ಲಿ ಸಮಾನತೆ ತರಬೇಕು ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಸಮಾಜದಲ್ಲಿ ಸಮಾನತೆ ಬಗ್ಗೆ ಅವರು ಮಾತನಾಡುವುದಿಲ್ಲ ಎಂದು ದೂರಿದರು.
ಮಹಿಳಾ ಕುಸ್ತಿಪಟುಗಳು ಕಣ್ಣೀರು ಹಾಕಿದರೂ ಅವರು ತಲೆಕೆಡಿಸಿಕೊಂಡಿಲ್ಲ. ಅವರು ಮೊದಲು ತಮ್ಮ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಹೇಳಿದರು. ಹಿಜಾಬ್ ವಿಷಯ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತೀರ್ಪು ಬಂದ ನಂತರ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ.