ಮಂಡ್ಯ: ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ (Permanent Husband) ಇರಲಿಲ್ಲ.
ತ್ರಿವಳಿ ತಲಾಕ್ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವಾಗಿದೆ ಎಂದು ಹಿಂದು ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಹೇಳಿದರು.
ಮಂಡ್ಯ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಮುಸಲ್ಮಾನ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರೂ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ? ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡ್ತೀರಾ? ನಿಮಗೆ ತ್ರಿವಳಿ ತಲಾಖ್ ನೀಡುವ ಪದ್ಧತಿಯನ್ನು ತೆಗೆದು ಹಾಕಿದ್ದು ನರೇಂದ್ರ ಮೋದಿ ಅಲ್ಲವೇ ಎಂದು ಪ್ರಶ್ನಿಸಿದರು.