Breaking News

ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ಸಿಎಂ ವಿರುದ್ಧ ಮುಗಿಬಿದ್ದ ಕೇಸರಿ ಕಲಿಗಳು,

Spread the love

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿವೈ ವಿಜಯೇಂದ್ರ, ಆರ್.ಅಶೋಕ್. ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶಾಲಾ ಮಕ್ಕಳ ನಡುವೆ ಯಾವುದೇ ತಾರತಮ್ಯ ಇರಬಾರದು ಎಂಬ ಕಾರಣಕ್ಕೆ ಸಮವಸ್ತ್ರ ಜಾರಿಗೆ ತರಲಾಗಿದೆ. ಆದರೆ, ಕೆಲವ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹಿಜಾಬ್ ನಿಷೇಧ ನಿರ್ಧಾರವನ್ನು ವಾಪಸ್ ಪಡೆಯುವ ತೀರ್ಮಾನವನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ.

ಕೂಡಲೇ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿ, ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು ಮತ್ತು ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯ ಅವರು ಮತ್ತೆ ಹಿಜಾಬ್ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಯಾವ ಶಾಲೆಯಲ್ಲಿ ವಸ್ತ್ರಸಂಹಿತೆ ಇದೆ ಅಲ್ಲಿ ಮಾತ್ರ ನಿಷೇಧ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ