ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನದಲ್ಲಿ ಭಾಗಿಯಾಗುವ ಮುನ್ನ ಬಿಜೆಪಿ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ಎಲ್ಲ ಭಾಗದ ಯುವಕರು ಹಾಗೂ ಹಿರಿಯರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಈಗ ನಮ್ಮಮುಂದೆ ದೊಡ್ಡ ಸವಾಲು ಇದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ನಡೆಸಲು ಬಲ ಬಂದಿದೆ.
ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮೂಲಕ ಲೋಕಸಭಾ ಚುನಾವಣೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ನೂತನ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವವರೆಗೂ ವಿರಮಿಸುವುದಿಲ್ಲ ಎಂದು ಇದೇ ವೇಳೆ ಶಪಧ ಮಾಡಿದರು.
Laxmi News 24×7