Breaking News

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ

Spread the love

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ(kota srinivas poojary)ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್‌ಉ ಸಹ ನೇಮಕ ಮಾಡಲಾಗಿದೆ.

ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹಾಗೂ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಕ್ಕೆ ಅರವಿಂದ್ ಬೆಲ್ಲದ್​ ಅಸಮಾಧಾನಗೊಂಡಿದ್ದರು. ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅರವಿಂದ ಬೆಲ್ಲದ್ ಅವರನ್ನು ಸಮಾಧಾನಪಡಿಸಲು ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ಇನ್ನು ವಿಪಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್​ ರವಿ ಕುಮಾರ್ ಅವರಿಗೆ ವಿಧಾನಪರಿಷತ್​ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ