Breaking News

ಕನಕಪುರ ಬಂಡೆಗೆ ಲಗಾಮು?: ದೆಹಲಿಗೆ ಜಾರಕಿಹೊಳಿ ದೌಡು, ಮೂರು ಡಿಸಿಎಂ ನೇಮಕಕ್ಕೆ ಒತ್ತಡ

Spread the love

ಬೆಂಗಳೂರು: ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಚರ್ಚೆಗಳು ನಡೆಯುತ್ತಿದ್ದವು. ಈ ಬಗ್ಗೆ ಬಹಿರಂಗವಾಗಿಯೇ ಸಚಿವ ಕೆ.ಎನ್.

ರಾಜಣ್ಣ ಸೇರಿದಂತೆ ಹಲವು ಸಚಿವರು ಹೇಳಿಕೆಯನ್ನು ನೀಡಿದ್ದರು. ಮೂವರು ಮುಖ್ಯಮಂತ್ರಿಗಳ ನೇಮಕ ವಿಚಾರ ಕಾಂಗ್ರೆಸ್ನಲ್ಲಿ ಒಳ ಬೇಗುದಿ ಹುಟ್ಟು ಹಾಕಿದ್ದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡದಂತೆ ತಾಕೀತು ಮಾಡಿತ್ತು. ಆಗ ಮೂವರು ಉಪಮುಖ್ಯಮಂತ್ರಿಗಳ ನೇಮಕ ಹಿನ್ನಲೆಗೆ ಸರಿದಿತ್ತು. ಲೋಕಸಭಾ ಚುನಾವಣೆಗೂ ಮುನ್ನ ಶತಾಯ ಗತಾಯ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲೇಬೇಕು ಎಂದು ಹೈಕಮಾಂಡ್ ಮನವೊಲಿಸಲು ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟಿರುವ ಸಚಿವರುಗಳು ನಿರ್ಧರಿಸಿದ್ದು, ಆದರಂತೆ ಸತೀಶ್ ಜಾರಕಿಹೊಳಿ ಅವರು ಇಂದು ದಲಿತ ನಾಯಕರುಗಳ ಜತೆ ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ರಾಹುಲ್ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಇವರುಗಳನ್ನು ಭೇಟಿ ಮಾಡಿ ಮೂವರು ಉಪಮುಖ್ಯಮಂತ್ರಿಗಳ ನೇಮಕಾತಿ ಮಾಡಿ ಎಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣೆಗೆ ಮುನ್ನ ವಿವಿಧ ಸಮುದಾಯಗಳಿಗೆ ಸೇರಿದ ಮೂವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ ಚುನಾವಣೆಯಲ್ಲಿ ಆ ಸಮುದಾಯದ ಮತಗಳಿಸುವುದು ಸುಲಭವಾಗುತ್ತದೆ. ರಾಜಕೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬುದನ್ನು ಸತೀಶ್ ಜಾರಕಿಹೊಳಿ ಹೈಕಮಾಂಡ್ ಗಮನಕ್ಕೆ ತರಲಿದ್ದರಾ ಎಂದು ಹೇಳಲಾಗಿದೆ. ಕನಕಪುರ ಬಂಡೆಗೆ ಲಗಾಮು ಹಾಕುವ ಉದ್ದೇಶ ಸರ್ಕಾರ ರಚನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ