ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ.
ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು.
ಭಾಷಣವೊಂದರಲ್ಲಿ ಮಾತನಾಡುತ್ತಾ ಸಚಿವ ಶಿವಾನಂದ ಪಾಟೀಲ್, ಬರ ಬಂದರೆ ಪರಿಹಾರ ಸಿಗುತ್ತದೆ. ಹೀಗಾಗಿ ರೈತರು ಬರ ಎಂದರೆ ಇಷ್ಟಪಡುತ್ತಾರೆ ಎಂದು ಹೇಳಿಕೆ ನೀಡಿದ್ದರು. ವಿವಾದ ಹೆಚ್ಚಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ್ದ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ಹಿಂಪಡೆಯಲು ನಿರಾಕರಿಸಿದ್ದರು. ಈ ಹಿಂದೆಯೂ ಶಿವಾನಂದ ಪಾಟೀಲ್ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೀನಾಯವಾಗಿ ಹೇಳಿಕೆ ನೀಡಿದ್ದರು.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವರ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ