Breaking News

ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ? ಎಂದು ಪ್ರಶ್ನಿಸಿದ್ದಾರೆ. 15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ.

ಶಿಫಾರಸು ಮಾಡಿದ್ದುದು ನಿಜ. ಆದರೆ 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು.

ಅಲ್ಲವೇ? ಎಂದಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ 2020-21ನೇ ಹಣಕಾಸು ವರ್ಷದಿಂದ ಈವರೆಗೆ ಕರ್ನಾಟಕಕ್ಕೆ 6561.91 ಕೋಟಿ ರೂ. ಮೊತ್ತವನ್ನು 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ ಕರ್ನಾಟಕಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ