Breaking News

ನಾರಾಯಣ ಗೌಡ ಸೇರಿದಂತೆ 29 ಮಂದಿಗೆ 14 ದಿನಗಳ ನ್ಯಾಯಾಂಗ ಬಂಧನ

Spread the love

ನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬೆಂಗಳೂರು: ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಡಿಸೆಂಬರ್ 27ರಂದು (ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಚಳವಳಿಗೆ ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡರು ಸೇರಿದಂತೆ ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಎಲ್ಲಾ ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬಂಧನದ ಬೆನ್ನಲ್ಲೇ ಎಲ್ಲಾ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸುವಂತೆ ನಾರಾಯಣಗೌಡರು ಕರೆ ಕೊಟ್ಟಿದ್ದಾರೆ.

ಬೆಳಗ್ಗೆಯಿಂದ ಊಟ ನೀಡಿಲ್ಲ, ಔಷಧಿಯನ್ನು ನೀಡಿಲ್ಲ. ನನ್ನ ಮೊಬೈಲ್ ಕಸಿದು ನೋವುಂಟು ಮಾಡಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಕಾರ್ಯಕರ್ತರನ್ನ ಬಂಧನ ಮಾಡಿದ್ದಾರೆ ಎಂದು ನಾರಾಯಣಗೌಡರು ಆರೋಪಿಸಿದರು. ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ