Breaking News

ಯತ್ನಾಳ್​ಗೆ ಮೂಗುದಾರ ಹಾಕಲು ಹಿರಿಯ ನಾಯಕರ ಸಭೆ

Spread the love

ಬೆಂಗಳೂರು, (ಡಿಸೆಂಬರ್ 28): ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ.

ಇದಕ್ಕೆ ಪೂರಕವೆಂಬಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ನಿನ್ನೆ(ಡಿಸೆಂಬರ್ 27) ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 28) ವಿಜಯೇಂದ್ರ ನೇತೃತ್ವದ ಹಿರಿಯ ಬಿಜೆಪಿ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆಗಳು ನಡೆದಿವೆ.

ಅಲ್ಲದೇ ಈ ಸಭೆಯಲ್ಲೂ ಸಹ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಗ್ಗೆ ಪ್ರಸ್ತಾಪವಾಗಿದ್ದು, ಯತ್ನಾಳ್ ಹೇಳಿಕೆಗಳಿಗೆ ಬ್ರೇಕ್ ಹಾಕಲು ಹೈಕಮಾಂಡ್ ಮೊರೆ ಹೋಗುವುದು ಒಳಿತು ಎನ್ನುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ