Breaking News

ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ:B.S.Y.

Spread the love

ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ವೈರಸ್‌ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.

ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು.

ಆದ್ರೆ ಸರ್ಕಾರ ರಾಜ್ಯದ ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ. ಹೀಗಾಗಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ