Breaking News

ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೊಳಿಸಲು ವಿಫಲವಾದಾಗ ಹೋರಾಟ ಅನಿವಾರ್ಯ: ಬೊಮ್ಮಾಯಿ

Spread the love

ನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನವೀಕೃತ ಕುವೆಂಪು ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ಬೆಂಬಲಿಸುವುದು ಇಂದಿನ ಅಗತ್ಯವಾಗಿದೆ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮತ್ತಿತರರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಸುಮಾರು 2 ಸಾವಿರ ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂಬ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ