Breaking News

ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್‌ ಮಾತನ್ನು ಸಿಎಂ ನೆನಪಿಸಿದರು.

ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ