2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.
ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಆದರೆ, ಪಕ್ಷದ ನಾಯಕರು ಮಾತ್ರ ಕಲಹಗಳ ಮರೆ ಮಾಚರು ಲೋಕಸಭಾ ಚುನಾವಣೆಗೆ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಮಾತುಕತೆ ನಡೆಸಿದ್ದಾರೆಂದು ಹೇಳಿದ್ದಾರೆ.
ಮಾತುಕತೆ ವೇಳೆ ಜಾರಿಕಿಹೊಳಿಯವರು ಎಸ್ಸಿ/ಎಸ್ಟಿ ಮತ್ತು ವೀರಶೈವ-ಲಿಂಗಾಯತ ಸಮುದಾಯಗಳ ನಾಯಕರಿಗೆ ಉಪ ಮುಖ್ಯಮಂತ್ರಿಗಳ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಸೂಚಿಸಿರುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ. ಹೀಗಾಗಿ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿಯವರ ವರ್ಚಸನ್ನು ಎದುರಿಸಬೇಕಾದ ಅಗತ್ಯವಿದ್ದು, ಈ ವೇಳೆ ಪಕ್ಷ ಕೂಡ ಜಾತಿ ಲೆಕ್ಕಾಚಾರದಲ್ಲಿಯೇ ತಂತ್ರ ರೂಪಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.