Breaking News

ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ

Spread the love

ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಜ್ಯೋತಿ (22) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜೀವನ್​ ತಲೆಮಾರಿಸಿಕೊಂಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

 

ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ತುಂಡು ಬಟ್ಟೆ ಧರಿಸುವುದು, ಮಾಡರ್ನ್​ ಉಡುಪು ಧರಿಸುವುದನ್ನು ಈಕೆಯ ಪತಿ ಜೀವನ್​ ವಿರೋಧಿಸುತ್ತಿದ್ದ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.

ಶನಿವಾರ ಕುಡ ಜ್ಯೋತಿ ಮಾಡರ್ನ್​ ಬಟ್ಟೆ ಧರಿಸಿ ಹೊರಗೆ ಹೊರಟ್ಟಿದನ್ನು ಗಮನಿಸಿದ ಪತಿ ಜೀವನ್​ ಡ್ರಾಪ್​ ಮಾಡುವುದಾಗಿ ಹೇಳಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಬಳಿಕ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ