ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.
ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು.
ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. ಈ ವೇಳೆ ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ವಿತರಿಸಲಾಯಿತು.
ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಘಟನೆ ತಡೆದ ಕಾಕತಿ ಠಾಣೆಯ ಪಿಎಸ್‌ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೂ ಸನ್ಮಾನಿಸಲಾಯಿತು.