Breaking News

ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Spread the love

ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ‌ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ.

 

ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಆಕೆ ಜೀವನದಲ್ಲಿ ನೊಂದು ಈ ಕೃತ್ಯಕ್ಕೆ ಮುಂದಾಗಿದ್ದಳು ಎಂದು ಹೇಳಲಾಗಿದೆ. ಆದರೆ, ನಿಜವಾದ ಕಾರಣ ಎಂದು ತಿಳಿದುಬಂದಿಲ್ಲ. ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಕೆಯ ಮನೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದೆಯಾ ಎನ್ನುವುದು ತಿಳಿದುಬಂದಿಲ್ಲ.

ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ