Breaking News

ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Spread the love

ದಾವಣಗೆರೆ : ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ.

 

ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. ಲೋಕಸಭಾ ಚುನಾವಣೆಗೆ ಪ್ರತಾಪ್ ಸಿಂಹ ಹೆಸರು ಕೆಡಿಸಲು ಈ ರೀತಿ ಮಾಡ್ತಾ ಇದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.

ಜಮ್ಮಾಪುರದಲ್ಲಿಬರವೀಕ್ಷಣೆ

ಇದೇ ವೇಳೆ ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಬಿಜೆಪಿ ಮುಖಂಡರ ಜೊತೆ ದಾವಣಗೆರೆ ತಾಲೂಕಿನ ಜಮ್ಮಾಪುರದಲ್ಲಿ ಬರ ವೀಕ್ಷಣೆ ಮಾಡಿದರು. ಜಮ್ಮಾಪುರ ಗ್ರಾಮದ ಮರಳು ಸಿದ್ದಪ್ಪ, ಸಿದ್ದಮ್ಮ ಜಮೀನಿಗೆ ಭೇಟಿ ನೀಡಿ ಬರದಿಂದ ಹಾಳಾದ ಮೆಕ್ಕೆಜೋಳ ಪರಿಶೀಲನೆ ಮಾಡಿದರು. ರೈತರಿಗೆ ಹಸಿರು ಶಾಲು ಹೊದಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ