Breaking News

ಸಿಎಂ ಬೆನ್ನಲ್ಲೇ ಗೃಹ ಸಚಿವರಿಂದ ರಾಮ ಮಂದಿರ ಪರ ಹೇಳಿಕೆ

Spread the love

ಬೆಂಗಳೂರು, ಜನವರಿ 2: ಭಗವಾನ್ ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗೆ ಸಂಬಂಧಿಸಿದ್ದಲ್ಲ. ಅದು ವಿಶ್ವಕ್ಕೇ ಮಾದರಿ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ (Ram Mandir) ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಗೃಹ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. ಇದು ನಮ್ಮ ಸಂವಿಧಾನದ ಆಧಾರವೂ ಆಗಿದೆ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಸಂವಿಧಾನವನ್ನು ರೂಪಿಸಲು ಬಯಸಿದಾಗ, ಅದಕ್ಕೆ ರಾಮರಾಜ್ಯ ಮಾದರಿಯ ಸಾರವನ್ನು ತೆಗೆದುಕೊಂಡಿದ್ದರು. ಹಾಗಾಗಿ, ರಾಮರಾಜ್ಯ ಮಾದರಿಯು ಬಿಜೆಪಿ ಅಥವಾ ಸ್ಥಳೀಯ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಅದು ಜಾಗತಿಕ ಮಾದರಿಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಪರಮೇಶ್ವರ ಹೇಳಿದ್ದಾರೆ.

ಆದರೆ, ರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವು ಏನು ಎಂಬುದು ನನಗೆ ತಿಳಿದಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಪಕ್ಷವು ಭಾಗವಹಿಸಲು ನಿರ್ಧರಿಸಿದರೆ ನಾವು ಖಂಡಿತವಾಗಿಯೂ ಹೋಗುತ್ತೇವೆ. ನಾವೇಕೆ ಹೋಗಬಾರದು, ಶ್ರೀರಾಮ ಕೇವಲ ಬಿಜೆಪಿಯ ದೇವರಲ್ಲ, ಎಲ್ಲರಿಗೂ ಪೂಜ್ಯ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ