Breaking News

ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ

Spread the love

ಬೆಂಗಳೂರು,ಜ.2- ಸಿನಿಮಾ ನೋಡಿ ಪ್ರೇರಣೆಗೊಂಡು ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಶ್ರೀನಾಥ ರೆಡ್ಡಿ(34) ಬಂಧಿತ ವಂಚಕ.

ಈತ 10ನೇ ತರಗತಿ ವ್ಯಾಸಂಗ ಮಾಡಿದ್ದು, ಆಂಧ್ರಪ್ರದೇಶದಲ್ಲೂ ಸರ್ಕಾರಿ ನೌಕರರಿಗೆ ಇದೇ ರೀತಿ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಅನಾ ಮಧೇಯ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಯೊಬ್ಬರಿಗೆ
ಮೊಬೈಲ್‍ನಿಂದ ಕರೆ ಮಾಡಿ ತಾನು ಲೋಕಾಯುಕ್ತ ಇನ್‍ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡು, ನಮ್ಮ ಎಡಿಜಿಪಿ ಸಾಹೇಬರು ಮಾತನಾಡುತ್ತಾರೆಂದು ಹೇಳಿ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪಿಟಿಶನ್ ಇರುತ್ತದೆ. ಅದನ್ನು ವಿಚಾರಣೆ ಮಾಡದೆ ಮುಕ್ತಾಯಗೊಳಿಸಬೇಕಾದರೆ ಹಣ ನೀಡಬೇಕಾಗುತ್ತದೆ ಎಂದು ಹೆದರಿಸಿದ್ದಾನೆ.

ನೀವು ಹಣ ಕೊಟ್ಟರೆ ಪಿಟಿಶನ್‍ನ್ನು ನಮ್ಮ ಟೆಕ್ನಿಕಲ್ ಟೀಮ್‍ನಿಂದ ವಿಚಾರಣೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಲಾಗುವುದು ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದನು.

ಈ ಅನಾಮಧೇಯ ವ್ಯಕ್ತಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ